ಬಿಸಿನೀರಲ್ಲಿ ಕೇವಲ 5 ನಿಮಿಷ ಪಾದ ಅದ್ದಿದರೆ ಯಾವೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?
* ನಮ್ಮ ಕಾಲುಗಳೇ ನಮ್ಮ ದೇಹಕ್ಕೆ ಆಧಾರಸ್ತಂಭ, ನಮ್ಮ ಇಡೀ ದೇಹ ನಿಂತಿರುವುದೇ ನಮ್ಮ ಪಾದ ಮೇಲೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಅದೇ ಪಾದಗಳಿಗೆ ವ್ಯಾಯಾಮ ಮಾಡುವುದರಿಂದ ನಮ್ಮ ಆರೋಗ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂಬ ವಿಷಯ ಎಷ್ಟೋ ಮಂದಿಗೆ ತಿಳಿದೇ ಇಲ್ಲ. ಪ್ರತಿದಿನ ನೀವು ಯಾವಾಗ್ಯಾವಾಗ ಫ್ರೀ ಇರ್ತೇರೋ ಅವಾಗ, ಟಿವಿ ನೋಡ್ತಿರ್ವಾಗ ಅಥವಾ ನ್ಯೂಸ್ ಪೇಪರ್ ಓದುವಾಗ ನಿಮ್ಮ ಪಾದಗಳನ್ನು ಹದಿನೈದು ನಿಮಿಷಗಳ ಕಾಲ ಬಿಸಿನೀರಿಗೆ ಇಟ್ಟು ಅದ್ದುವುದರಿಂದ ನಿಮ್ಮ ಆರೋಗ್ಯವನ್ನು ಇಮ್ಮಡಿಸಿಕೊಳ್ಳಬಹುದು. ಹೀಗೆ ಮಾಡುವುದರಿಂದ ಯಾವೆಲ್ಲಾ ಪ್ರಯೋಜನಗಳನ್ನು ಪಡ್ಕೋಬೋದು ಎಂದು ತಿಳಿದುಕೊಳ್ಳಲು ಮುಂದೆ ಓದಿ.
*1.ಹಿಮ್ಮಡಿ ಒಡೆಯುವುದು ತಪ್ಪುತ್ತದೆ:* ಚಳಿಗಾಲದಲ್ಲಿ ಚರ್ಮ,ಪಾದದ ಹಿಮ್ಮಡಿ ಒಡೆದು ಅಸಹ್ಯವಾಗಿ ಕಾಣಿಸಿಕೊಳ್ಳುವುದು ಎಲ್ಲರಲ್ಲೂ ಇರುವ ಸಾಮಾನ್ಯ ಸಮಸ್ಯೆಯಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬಿಸಿ ನೀರಿನಲ್ಲಿ ನಿಮ್ಮ ಪಾದವನ್ನು ಸುಮಾರು ಹದಿನೈದು ನಿಮಿಷಗಳಷ್ಟು ಕಾಲ ಅದ್ದಿಕೊಂಡಿದ್ದರೆ ಸಾಕು.
*2. ಶೀತ ಮತ್ತು ನೆಗಡಿಯ ಹತೋಟಿ :
* ಶೀತ, ನೆಗಡಿ ಮತ್ತು ಕಫ ಸಮಸ್ಯೆಯಿಂದ ನೀವು ಬಳಲುತ್ತಿದ್ದರೆ ನಿಮ್ಮ ಪಾದಗಳನ್ನು ಹದಿನೈದು ನಿಮಿಷಗಳ ಕಾಲ ಬಿಸಿನೀರಿನಲ್ಲಿ ಹಾಕಿ ಹದ್ದಿಕೊಂಡು ಮೂಗಿನ ಮೂಲಕ ಹಬೆಯನ್ನು ತೆಗೆದುಕೊಳ್ಳುವುದರಿಂದ ಬಹು ಬೇಗ ನಿಮ್ಮ ನಿಮ್ಮ ಕಟ್ಟಿದ ಮೂಗು, ಶೀತ, ನೆಗಡಿ ಸಮಸ್ಯೆಗಳು ಹತೋಟಿಗೆ ಬರುತ್ತವೆ. ಕಫ ಸಮಸ್ಯೆಕೂಡ ಕಡಿಮೆಯಾಗುತ್ತದೆ.
*3. ಕುತ್ತಿಗೆ ನೋವಿನ ಶಮನ:
* ಈಗ ಕುತ್ತಿಗೆ ನೋವು ಹಲವರಲ್ಲಿ ಕಂಡುಬರುತ್ತಿದೆ. ನರಮಂಡಲದ ಮೂಲ ನರಗಳು ಪಾದ ಮತ್ತು ಅಂಗೈನಲ್ಲೂ ಸಹ ಇರುವುದರಿಂದ ಪಾದವನ್ನು ಹದಿನೈದು ನಿಮಿಷಗಳ ಕಾಲ ಬಿಸಿನೀರಿನಲ್ಲಿ ಅದ್ದಿಕೊಂಡರೆ ಕುತ್ತಿಗೆ ನೋವು ಮತ್ತು ಕುತ್ತಿಗೆಯ ಸೆಳೆತಗಳು ಮಾಯವಾಗುತ್ತದೆ.
*4. ಒತ್ತಡದ ನಿವಾರಣೆ:*
ಬಿಸಿ ನೀರಿನಲ್ಲಿ ನಮ್ಮ ಪಾದಗಳನ್ನು ಸುಮಾರು ಹದಿನೈದು ನಿಮಿಷಗಳ ಹೊತ್ತು ಅದ್ದಿಕೊಂಡು ಕುಳಿತುಕೊಳ್ಳುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಚುರುಕುಗೊಂಡು ಮಾನಸಿಕ ಮತ್ತು ದೈಹಿಕ ಒತ್ತಡವು ಕಡಿಮೆಯಾಗುತ್ತದೆ.
*5. ತಲೆನೋವು ಕಡಿಮೆಯಾಗುತ್ತದೆ *
ಪಾದಗಳನ್ನ ಬಿಸಿ ನೀರಿನಲ್ಲಿ ಸುಮಾರು ಹದಿನೈದು ನಿಮಿಷಗಳ ಕಾಲ ಅದ್ದಿದಾಗ ಪಾದಕ್ಕೆ ರಕ್ತ ಸಂಚಾರ ಹೆಚ್ಚಾಗುವುದರಿಂದ ಕತ್ತಿನ ಮತ್ತು ಬೆನ್ನಿನ ಸ್ನಾಯುಗಳು ಸಡಿಲವಾಗುತ್ತದೆ. ಹಾಗಾಗಿ ಒತ್ತಡದಿಂದ ಉಂಟಾದ ತಲೆನೋವು ದೂರವಾಗುತ್ತದೆ.
*6. ನಿದ್ರಾಹೀನತೆಯನ್ನು ಹೋಗಲಾಡಿಸುತ್ತದೆ
:*
ರಾತ್ರಿ ನೀವು ಮಲಗುವ ಮುಂಚೆ ಹದಿನೈದು ನಿಮಿಷಗಳ ಕಾಲ ನಿಮ್ಮ ಪಾದವನ್ನು ಬಿಸಿನೀರಿನಲ್ಲಿ ಅದ್ದಿಕೊಂಡು ಕುಳಿತುಕೊಳ್ಳುವುದರಿಂದ ನಿಮ್ಮ ಒತ್ತಡ ಕಡಿಮೆಯಾಗಿ ನಿಮ್ಮ ನಿದ್ರಾ ಹೀನತೆಯ ಸಮಸ್ಯೆಗೆ ಪರಿಹಾರ ತಂದುಕೊಟ್ಟು ಮತ್ತು ನಿದ್ರೆಯು ಚನ್ನಾಗಿ ಬರುತ್ತದೆ
*7. ಹಿಮ್ಮಡಿ ನೋವಿಗೆ ಪರಿಹಾರ :*
ನೀವು ಹೆಚ್ಚು ಕೆಲಸಮಾಡಿದಾಗ ನಿಮಗೆ ಹಿಮ್ಮಡಿ ನೋವು ಬರುವುದು ಸಾಮಾನ್ಯ. ಈ ರೀತಿ ಹಿಮ್ಮಡಿ ನೋವು ಬಂದಾಗ ನಿಮ್ಮ ಎರಡು ಪಾದಗಳನ್ನು ಬಿಸಿನೀರಿನಲ್ಲಿ ಅದ್ದಿಕೊಳ್ಳುವುದರಿಂದ ಹಿಮ್ಮ ನೋವು ಬಹು ಬೇಗ ಮಾಯವಾಗುತ್ತದೆ.
👤👤👤👤👤👤👤👤👥👥👥👥👥👥👥
*ಎಂತಹ ಕೀಲು ನೋವನ್ನಾದರೂ (ಆರ್ಥರೈಟಿಸ್) ಮೂರು ತಿಂಗಳಲ್ಲೇ ಕಡಿಮೆ ಮಾಡುವ ಅದ್ಭುತವಾದ ಔಷಧ*....! ಕೂತರೂ, ನಿಂತರೂ, ಬಗ್ಗಿದರೂ…. ಕೀಲು, ಮೂಳೆಗಳ ನೋವು….. ಒಂದು ಹೆಜ್ಜೆ ತೆಗೆದು ಇನ್ನೊಂದು ಹೆಜ್ಜೆ ಹಾಕಬೆಕೆಂದರೇನೆ ತೀವ್ರವಾದ ನೊವು ಅನುಭವಿಸಬೇಕಾಗುತ್ತದೆ. ಅಂತಹ ನೋವನ್ನು ಉಂಟುಮಾಡುತ್ತವೆ ಈ ರುಮಾಟಾಯಿಡ್, ಅರ್ಥರೈಟಿಸ್ ನೋವುಗಳು. ನಿಜವಾಗಲೂ ಎರಡು ಕೀಲುಗಳು, ಮೂಳೆಗಳಿಗೆ ಸಂಬಂದಿಸಿದ ನೋವುಗಳೇ ಆದರೂ ಹೆಚ್ಚು ಕಡಿಮೆ ಒಂದೇ ಕಾಯಿಲೆಯ ಲಕ್ಷಣಗಳನ್ನು ಹೊಂದಿರುತ್ತವೆ. ಆದರೆ ಕೆಳಗೆ ಕೊಟ್ಟಿರುವ ಪವರ್ ಫುಲ್ ಎಫೆಕ್ಟೀವ್ ಟಿಪ್ಸ್’ನ್ನು ಆಚರಿಸಿದರೆ ಕೇವಲ 3 ತಿಂಗಳಲ್ಲಿ ಎಂತಹ ಅರ್ಥರೈಟಿಸ್ ನೋವುಗಳಾದರೂ, ಕ್ಷಣದಲ್ಲಿ ಕಡಿಮೆಯಾಗುತ್ತವೆ. ಆ ಟಿಪ್ಸ್ ಯಾವುದು ಎಂದು ಈಗ ನಾವು ತಿಳಿದುಕೊಳ್ಳೊಣ ಬನ್ನಿ.
*ಪಾರಿಜಾತ ಎಲೆಗಳು…..
* ಪಾರಿಜಾತ ಗಿಡ ನಿಮಗೆ ತಿಳಿದಿರುತ್ತದೆ. ಅದರ ಹೂ ಬಿಳಿಯ ಬಣ್ಣದಲ್ಲಿರುತ್ತದೆ. ರಾತ್ರಿ ಹೊತ್ತಿನಲ್ಲಿ ಈ ಹೂಗಳು ಬಿಡುತ್ತವೆ. ಸುಮಾರು ದೂರದವರೆಗೂ ಈ ಹೂವಿನ ಪರಿಮಳ ವಿರುತ್ತದೆ. ದೇವಾಲಯಗಳಲ್ಲಿ ಹೆಚ್ಚಾಗಿ ಈ ಗಿಡಗಳೇ ಇರುತ್ತವೆ. ಇದರ ಎಲೆಗಳನ್ನು 6, 7 ರಷ್ಟು ತೆಗೆದುಕೊಂಡು ನುಣ್ಣಗೆ ಫೇಸ್ಟ್ ಮಾಡಿಕೊಳ್ಳಬೇಕು. ಅದನ್ನು ಒಂದು ಗ್ಲಾಸ್ ನೀರಿನಲ್ಲಿ ಚೆನ್ನಾಗಿ ಕುದಿಸಬೇಕು. ಆ ನೀರು ಅರ್ಧ ಆಗುವವರೆಗೂ ಕಷಾಯದಂತೆ ಮಾಡಿಕೊಳ್ಳಬೇಕು. ಆ ಕಷಾಯವನ್ನು ರಾತ್ರಿಯೆಲ್ಲ ಹಾಗೆಯೇ ಇಟ್ಟು ಬೆಳಿಗ್ಗೆ ತಣ್ಣಗೆ ಇರುವಾಗಲೇ ಕುಡಿಯಬೇಕು. *ಮೇಲೆ ಹೇಳಿರುವ ಪಾರಿಜಾತ ಎಲೆಗಳ ಕಷಾಯವು, ರುಮಟಾಯಿಡ್, ಅರ್ಥರೈಟಿಸ್, sciatica, ಸೊಂಟ ನೋವು, ಮಂಡಿ ನೋವುಗಳಿಗೆ, ಶಸ್ತ್ರ ಚಿಕಿತ್ಸೆ ಇಲ್ಲದೆ ಅದ್ಭುತವಾದ ಔಷಧವಾಗಿ ಕೆಲಸ ಮಾಡುತ್ತದೆ. ಇದನ್ನು ತಯಾರಿಮಾಡಿಕೊಂಡು ಪ್ರತಿದಿನ ತೆಗೆದುಕೊಂಡರೆ ಕೇವಲ 30 ರಿಂದ 40 ದಿನಗಳಲ್ಲೇ ಎಂತಹ ಕೀಲು ನೋವಾದರೂ ವಾಸಿಯಾಗುತ್ತದೆ. ಮೂಳೆಗಳಲ್ಲಿ ಸವೆದುಹೋಗಿರುವ ಕಾರ್ಟಿಲೆಜ್ ಎಂಬ ಅಂಶ ಮತ್ತೆ ಉತ್ಪತ್ತಿಯಾಗುತ್ತದೆ*.
ಜೊತೆಗೆ ಈ ಔಷಧವು ಡೆಂಗಿ ಜ್ವರಕ್ಕೂ ಸಹ ಉಪಯುಕ್ತವಾದದ್ದು. ಡೆಂಗಿ ಕಾರಣವಾಗಿ ಬರುವ ಮೈ ನೋವುಗಳು ಗುಣಮುಖವಾಗಬೇಕೆಂದರೆ ಈ ಔಷಧವನ್ನು ಕುಡಿಯಬೇಕು---ರಾಜೀವ್ ದೀಕ್ಷಿತ್ ಅವರಿಂದ ಬೆಳಕಿಗೆ ಬಂದ ಆಯುರ್ವೇದ ಋಷಿ ವಾಗ್ಭಟರ ಗ್ರಂಥದಿಂದ
👤👤👤👤👤👤👤👤👤👤👤👤👤👤👤
*ಉರಿ ಮೂತ್ರ ಸಮಸ್ಯೆಗೆ ಪರಿಹಾರ* ಬಿಳಿ ಎಳ್ಳು ಮತ್ತು ಸೌತೆಕಾಯಿ ಬೀಜಗಳನ್ನು ತುಪ್ಪದಲ್ಲಿ ಅರೆದು ಸೇವಿಸುವುದರಿಂದ ಉರಿಮೂತ್ರ ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ ಹೊಟ್ಟೆ ಕಟ್ಟಿರುವುದು ಮೂತ್ರ ವಿಸರ್ಜನೆಗೆ ಕಷ್ಟವಾಗುವುದು ಮತ್ತು ಹೊಟ್ಟೆಯ ಉಬ್ಬರ ಕೂಡ ಕಡಿಮೆ ಆಗುತ್ತದೆ . ನಾಲ್ಕೈದು ತುಳಸಿ ಎಲೆಗಳನ್ನು ಚೆನ್ನಾಗಿ ಅರೆದು ಹಾಲಿನ ಜೊತೆ ಮಿಶ್ರಣ ಮಾಡಿ ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ಉರಿಮೂತ್ರ ಕಡಿಮೆಯಾಗುತ್ತದೆ. ಸ್ವಲ್ಪ ಸುಣ್ಣವನ್ನು ಹರಳೆಣ್ಣೆ ಜೊತೆ ಮಿಶ್ರಣ ಮಾಡಿ ಕಿಬ್ಬೊಟ್ಟೆಯ ಮೇಲೆ ಹಚ್ಚಿದರೆ ಉರಿ ಮೂತ್ರ ಕಡಿಮೆಯಾಗುತ್ತದೆ ಅಷ್ಟೇ ಅಲ್ಲದೆ ಕಾಲಿನ ಹೆಬ್ಬೆರಳಿಗೆ ಸುಣ್ಣವನ್ನು ಹಚ್ಚುವುದರಿಂದ ಸಹ ಉರಿಮೂತ್ರ ರೋಗ ಕಡಿಮೆಯಾಗುತ್ತದೆ . ಒಂದು ಲೋಟ ಮಜ್ಜಿಗೆಗೆ ಒಂದು ತುಂಡು ಕಲ್ಲಂಗಡಿ ಹಣ್ಣಿನ ರಸವನ್ನು ಬೆರೆಸಿ ಕುಡಿಯುವುದರಿಂದ ಉರಿ ಮೂತ್ರ ರೋಗ ನಿವಾರಣೆಯಾಗುತ್ತದೆ. ಒಂದು ಚಮಚ ಸೊಗಡೇ ಬಳ್ಳಿಯ ಪುಡಿಯನ್ನು ಒಂದು ಲೋಟ ಹಾಲಿನಲ್ಲಿ ಮಿಶ್ರಣ ಮಾಡಿ ಕುಡಿಯುವುದರಿಂದ ಮೂತ್ರ ನಾಳಗಳಲ್ಲಿರುವ ಸೋಂಕು ನಿವಾರಣೆಯಾಗಿ ಉರಿಮೂತ್ರ ರೋಗ ವಾಸಿಯಾಗುತ್ತದೆ. ಒಂದು ಲೋಟಕ್ಕೆ ಐದರಿಂದ ಆರು ಚಿಗುರಿನ ವಸಭಿ ಗಿಡದ ಎಲೆಗಳನ್ನು ರುಬ್ಬಿ ಕುಡಿಯುವುದು ಇದರಿಂದ ಯಾವುದೇ ಸೂಕ್ಷ್ಮಾಣು ಜೀವಿಗಳ ಅಪಾಯವನ್ನು ನಾವು ತಪ್ಪಿಸಬಹುದು ಮೂತ್ರ ಸಹ ಸರಾಗವಾಗಿ ಆಗುತ್ತದೆ. ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಬೆಳಿಗ್ಗೆ ಎದ್ದ ಬಳಿಕ ಉಪಹಾರವನ್ನು ಸೇವಿಸುವ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಆಂತರಿಕ ಅಂಗಾಂಗಗಳನ್ನು ಕ್ರಿಯಾಶೀಲಗೊಳಿಸಲು ಮತ್ತು ಶರೀರದಲ್ಲಿಯ ಯಾವುದೇ ನಂಜಿನ ಅಂಶಗಳನ್ನು ನಿವಾರಿಸಲು ನೆರವಾಗುತ್ತದೆ.
ಊಟಕ್ಕೆ ಅರ್ಧ ಗಂಟೆ ಮೊದಲು ಒಂದು ಗ್ಲಾಸ್ ನೀರು ಕುಡಿಯುವುದರಿಂದ ಪಚನ ಕಾರ್ಯ ಸುಗಮವಾಗಿ ನಡೆಯುತ್ತದೆ. ಊಟಕ್ಕೆ ಕುಳಿತಾಗ ತುತ್ತನ್ನು ಬಾಯಿಗಿಟ್ಟುಕೊಳ್ಳುವ ಮುನ್ನ,ಊಟದ ನಡುವೆ ಅಥವಾ ಊಟವಾದ ತಕ್ಷಣ ನೀರನ್ನು ಕುಡಿಯಲೇಬೇಡಿ. ಹೀಗೆ ಮಾಡುವುದರಿಂದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಶರೀರವು ಪೌಷ್ಟಿಕಾಂಶಗಳನ್ನು ಹೀರಿಕೊಳ್ಳಲು ಅವಕಾಶ ನೀಡುವುದಿಲ್ಲ. ಸ್ನಾನ ಮಾಡುವ ಮುನ್ನ ಒಂದು ಗ್ಲಾಸ್ ನೀರಿನ ಸೇವನೆಯು ರಕ್ತದೊತ್ತಡವನ್ನು ತಗ್ಗಿಸಲು ನೆರವಾಗುತ್ತದೆ. ರಾತ್ರಿ ಮಲಗುವ ಮುನ್ನ ಒಂದು ಗ್ಲಾಸ್ ನೀರನ್ನು ಸೇವಿಸಿದರೆ ಅದು ರಾತ್ರಿ ಶರೀರದಲ್ಲಿ ಉಂಟಾಗಬಹುದಾದ ನೀರಿನ ಕೊರತೆಯನ್ನು ತುಂಬಿಸುತ್ತದೆ.
👤👤👤👤👤👤👥👤👤👤👤👤👤👤
☕☕"ನಂದಿನಿ ಹಾಲು: ಸರಿಯಾದ ಬಣ್ಣದ ಪ್ಯಾಕೆಟ್ ಆರಿಸಿಕೊಳ್ಳುವುದರ ಹಿಂದಿನ ರಹಸ್ಯ"☕☕ ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲ ಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ತರ್ಬೇಕು ಅನ್ನೋ ಪ್ರಶ್ನೇನ ಎಲ್ಲರೂ ಹಾಕಿಕೊಳ್ಳೋದಿಲ್ಲ. ಎಲ್ಲರೂ ಯಾವುದು ಕೊಂಡ್ಕೋತಾರೋ ಅದನ್ನೇ ತರೋದು ವಾಡಿಕೆ. ಅದು ಸಾಮಾನ್ಯವಾಗಿ ನೀಲಿ ಬಣ್ಣದ ಪ್ಯಾಕೆಟ್ಟೇ ಆಗಿರುತ್ತೆ! ಆದರೆ ನಂದಿನಿ ಹಾಲ್ನ ಸರಿಯಾಗಿ ಬಳಸಬೇಕು, ಅದರಿಂದ ಆದಷ್ಟು ಹೆಚ್ಚು ಉಪಯೋಗ ಪಡ್ಕೋಬೇಕು ಅನ್ನೋದಾದರೆ ಕೆಳಗಿನ ಮಾಹಿತಿ ಗಮನದಲ್ಲಿಡಿ...
1. ಹಾಗೇ (ಕಾಯಿಸದೆ) ಕುಡಿಯೋಕ್ಕೆ: ಬೆಳಗ್ಗೆ ಎದ್ದು ಹಾಲು ಕಾಯಿಸಿ ಕುಡಿಯಕ್ಕೆ ಟೈಮ್ ಇಲ್ವಾ? ಹಾಗಾದರೆ ನಂದಿನಿ ಗುಡ್ ಲೈಫ್ ಮಿಲ್ಕ್ ಪ್ಯಾಕೆಟ್ ತೊಗೊಂಡು ಹಾಗೆಯೇ ಕುಡಿಬೋದು. ಯಾಕೆ ಗೊತ್ತಾ? ಈ ಹಾಲನ್ನು ಪ್ಯಾಕೆಟಿಗೆ ಹಾಕೋ ಮುಂಚೆನೇ 137 ಡಿಗ್ರಿ ಸೆಲ್ಶಿಯಸ್ ತಾಪಮಾನದಲ್ಲಿ 4 ನಿಮಿಷಗಳ ತನಕ ಕಾಯಿಸಿ ತಕ್ಷಣವೇ ತಣ್ಣಗೆ ಮಾಡಿರುತ್ತಾರೆ. ಅದ್ದರಿಂದ ಈ ಹಾಲಿನಲ್ಲಿ ಬ್ಯಾಕ್ಟೀರಿಯಾ ಬೆಳೆಯಕ್ಕೆ ಅವಕಾಶವಿಲ್ಲ. ಟೆಟ್ರಾ ಪ್ಯಾಕಿನಲ್ಲಿ ಹಾಕುವುದರಿಂದ ಹೊರಗಿನ ಯಾವ ಉಷ್ಣಾಂಶದಿಂದ ಹಾಲು ಒಡೆಯುವುದಿಲ್ಲ.
2. ಕಾಯಿಸಿ ಕುಡಿಯಲು: ಉಕ್ಕು ಬರುವ ತನಕ ಕಾಯಿಸಿಕೊಂಡು ಕುಡಿಯುವುದಕ್ಕೆ ನಂದಿನಿಯ ಯಾವ ಬಣ್ಣದ ಪ್ಯಾಕೆಟ್ ಬೇಕಾದರೂ ತರಬಹುದು.
3. ಕಾಫಿ ಅಥವಾ ಟೀ ಮಾಡೋಕ್ಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದು ಮಾಡಿದರೆ ಹಾಲು ಒದಗುತ್ತದೆ. ಹೆಚ್ಚು ಲೋಟ ಕಾಫಿ/ಟೀ ಮಾಡಬಹುದು. ರುಚಿಯೂ ಚೆನ್ನ.
4. ಗಟ್ಟಿ ಕಾಫಿ ಮಾಡೋಕ್ಕೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದು ಗಟ್ಟಿ ಕಾಫಿ ಮಾಡಿಕೊಳ್ಳಬಹುದು. ಪೂರ್ತಿ ಕೆನೆಯ ಅಂಶ ಈ ಹಾಲಿನಲ್ಲಿ ಇರೋ ಹಾಗೆ ಮಾಡಿರುತ್ತಾರೆ. ಆದ್ರೇನೂ ಕೆನೆ-ಕೆನೆ ಕಟ್ಟಿಕೊಳ್ಳುವುದಿಲ್ಲ. ಯಾಕಂದ್ರೆ ಹೊಮೊಜಿನೈಸ್ಡ್ ಹದಕ್ಕೆ ಮಾಡಿರುತ್ತಾರೆ.
5. ಗಟ್ಟಿ ಮೊಸರು ಮಾಡೋಕ್ಕೆ: ನಂದಿನಿಯ ಸ್ಪೆಶಲ್ ಹಸಿರು ಬಣ್ಣದ ಪ್ಯಾಕೆಟ್ ಅಂದರೆ ಸ್ಪೆಶಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
6. ಪಾಯಸ ಅಥವಾ ಹಾಲಿನಿಂದ ಮಾಡುವ ಸಿಹಿ ಪದಾರ್ಥಗಳಿಗೆ: ನಂದಿನಿಯ ತುಸು ನೇರಳೆ ಬಣ್ಣದ ಪ್ಯಾಕೆಟ್ ಅಂದರೆ ನಂದಿನಿ ಸಮೃದ್ಧಿ ಪಾಸ್ಚರೀಕರಿಸಿದ ಹಾಲು ತಂದರೆ ತುಂಬಾ ಚೆನ್ನಾಗಿ ಆಗತ್ತೆ. "ಮಿಲ್ಕ್ ಮೈಡ್" ತರುವ ಬದಲು.
7. ಪುಟ್ಟ ಮಕ್ಕಳಿಗೆ ಕುಡಿಸೋಕೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ.
8. ಹಿರಿಯರಿಗೆ ಕುಡಿಯಲು: ನಂದಿನಿಯ ಗುಡ್ ಲೈಫ್ ಸ್ಲಿಮ್ಡ್ ಸ್ಕಿನ್ ಮಿಲ್ಕ್ ಪ್ಯಾಕೆಟ್ ಕೂಡ ತೊಗೊಬಹುದು. ಇದರಲ್ಲಿ ಹೆಸರೇ ಹೇಳುವಂತೆ ಕೊಬ್ಬಿನಂಶ ಕಡಿಮೆ ಇರುವುದರಿಂದ ವಯಸ್ಸಾದವರಿಗೆ ಜೀರ್ಣಿಸಿಕೊಳ್ಳಲು ಸುಲಭ. ಇದಲ್ಲದೆ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ - ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲೂ ಕಡಿಮೆ ಕೊಬ್ಬಿನಂಶ ಇರತ್ತೆ.
9. ಕೊಬ್ಬು ಇಳಿಸೋಕೆ: ಕೊಬ್ಬು ಕರಗಬೇಕು ಅಂತ ಹಾಲು ಕುಡಿಯೋದನ್ನ ನಿಲ್ಲಿಸಬಿಟ್ಟರೆ ಬೇರೆ ಪೌಷ್ಟಿಕಾಂಶಗಳ ಕೊರತೆ ಉಂಟಾಗತ್ತೆ. ಇದಕ್ಕೆ ಸುಲಭವಾಗಿ ಸಿಗುವ ನಂದಿನಿಯ ಹಳದಿ/ಕಿತ್ತಳೆ ಬಣ್ಣದ ಪ್ಯಾಕೆಟ್ - ಪಾಸ್ಚರೀಕರಿಸಿದ ಡಬಲ್ ಟೋನ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಕಡಿಮೆ ಕೊಬ್ಬಿನಂಶ ಇರತ್ತೆ.
10. ಬೆಳೆಯುವ ಮಕ್ಕಳಿಗೆ: ಕಿತ್ತಳೆ ಬಣ್ಣದ ನಂದಿನಿಯ ಶುಭಂ ಪ್ಯಾಕೆಟ್... ಅಥವಾ ಸಂಪೂರ್ಣ ಸ್ಟ್ಯಾಂಡರ್ಡೈಸ್ಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ. ಯಾಕಂದ್ರೆ ಇದರಲ್ಲಿ ಬೆಳೆಯುವ ಮಕ್ಕಳಿಗೆ ಬೇಕಾಗುವ ಕೊಬ್ಬಿನಂಶ ಇರತ್ತೆ. ಅವರ ದಿನ ನಿತ್ಯದ ಚಟುವಟುಕೆಗಳಿಗೆ ಸಾಕಷ್ಟು ಶಕ್ತಿ ಕೊಡತ್ತೆ.
11. ಬರೀ ಹಸುವಿನ ಹಾಲು ಬೇಕು ಅನ್ನುವವರಿಗೆ: ನಂದಿನಿಯ ಹಸಿರು ಬಣ್ಣದ ಪ್ಯಾಕೆಟ್- ಹೊಮೊಜಿನೈಸೆಡ್, ಪಾಸ್ಚರೀಕರಿಸಿದ ಹಸುವಿನ ಹಾಲು ತಂದರೆ ಒಳ್ಳೆಯದು. ಯಾಕಂದ್ರೆ ಬೇರೆ ಪ್ಯಾಕೆಟ್ನಲ್ಲಿ ಹಸು ಹಾಲಿನ ಜೊತೆ ಎಮ್ಮೆ ಹಾಲು ಸೇರಿಕೊಂಡಿರತ್ತೆ. 12. ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ಇರುವವರಿಗೆ: ನ್ಂದಿನಿ ಸ್ಮಾರ್ಟ್ ಡಬಲ್ ಟೋನ್ಡ್ ಹೊಮೊಜಿನೈಸೆಡ್ ಮಿಲ್ಕ್ ಪ್ಯಾಕೆಟ್ ತೊಗೊಳ್ಳಿ.
13. ತುಂಬಾ ದಿನ ಇಟ್ಟುಕೊಳ್ಳಬೇಕಾದರೆ: ಪ್ರವಾಸಕ್ಕೆ ಹೋಗ್ಬೇಕು, ಮಕ್ಕಳಿಗೆ ಹಾಲು ಸಿಗಲ್ವಲ್ಲಾ ಅಂತ ಚಿಂತೆ ಬಂದರೆ ನಂದಿನಿಯ ಗುಡ್ ಲೈಫ್ ಟೆಟ್ರಾ ಪ್ಯಾಕ್ ತೊಗೊಳ್ಳಿ. 10 ದಿನದ ತನಕ ಹಾಲನ್ನು ಹಾಗೆ ಕುಡಿಯಬಹುದು. ಕಾಯಿಸುವುದೂ ಬೇಡ. ಟೆಟ್ರಾ ಪ್ಯಾಕಿನಲ್ಲಿ ಇರುವುದರಿಂದ ಹಾಲು ಒಡೆಯುವುದಿಲ್ಲ.
👥👥👥👥👥👥👥👥👥👥👥👥👥👥👥
*ಕೊಲೆಸ್ಟ್ರಾಲ್ ಎನ್ನುವುದು ನಮ್ಮ ದೇಹಕ್ಕೆ ಬೇಕಾದ ಅಗತ್ಯ ಪದಾರ್ಥ*. ಇದರಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಹಾಗೂ ಕೆಟ್ಟ (ಬೇಡದ) ಕೊಲೆಸ್ಟ್ರಾಲ್ ಎಂದು ಎರಡು ಪ್ರಕಾರ ಇರುವುದನ್ನು ಕಾಣಬಹುದು. ದೇಹಕ್ಕೆ ಅಗತ್ಯವಿರುವ ಕೊಲೆಸ್ಟ್ರಾಲ್ ಹಾರ್ಮೋನ್‍ಗಳ ಉತ್ಪಾದನೆಗೆ, ಜೀರ್ಣಕ್ರಿಯೆಗೆ, ವಿಟಮಿನ್-ಡಿಯ ಉತ್ಪಾದನೆಗೆ ಸಹಾಯ ಮಾಡುತ್ತದೆ. ದೇಹಕ್ಕೆ ಬೇಡದ ಕೊಲೆಸ್ಟ್ರಾಲ್ ಅನಗತ್ಯವಾದ ಕೊಬ್ಬಿನಂಶವನ್ನು ಹೆಚ್ಚಿಸುತ್ತದೆ. ಜೊತೆಗೆ ರಕ್ತಸಂಚಾರಕ್ಕೆ ಅಡ್ಡಿಯನ್ನುಂಟುಮಾಡುವುದು. Ads By ZincScroll to Continue ಆಯುರ್ವೇದ ಟಿಪ್ಸ್: ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಸರಳ ಮನೆಮದ್ದು ನಾವು ಸೇವಿಸುವ ಆಹಾರವು ದೇಹಕ್ಕೆ ಅಗತ್ಯವಿರುವ ಪೂರಕ ಮತ್ತು ಮಾರಕವಾದ ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುವುದು. ಹಾಗಾಗಿ ಸೇವಿಸುವ ಆಹಾರದ ಬಗ್ಗೆಯೂ ಹೆಚ್ಚು ಗಮನವಹಿಸಬೇಕು. ಕೆಲವು ಸಂಶೋಧನೆಯ ಪ್ರಕಾರ ಭಾರತೀಯರ ಆಹಾರ ಪದ್ಧತಿಯು ಬಹಳ ಸರಳ ಹಾಗೂ ಆರೋಗ್ಯ ಪೂರ್ಣವಾದದ್ದು. ಇವರು ಬಳಸುವ ಆಹಾರ ಉತ್ಪನ್ನಗಳು ದೇಹಕ್ಕೆ ಅಗತ್ಯ ಕೊಲೆಸ್ಟ್ರಾಲ್ ಅನ್ನು ನೀಡಿ, ಅನಗತ್ಯ ಕೊಲೆಸ್ಟ್ರಾಲ್ಅನ್ನು ಹೋಗಲಾಡಿಸುತ್ತದೆ. ಹಾಗಾದರೆ ಆ ಆಹಾರ ಪದಾರ್ಥಗಳು ಯಾವವು ಎನ್ನುವುದನ್ನು ತಿಳಿಯಬೇಕಾದರೆ ಈ ಲೇಖನ ಓದುವುದನ್ನು ಮುಂದುವರಿಸಿ. ಕೊತ್ತಂಬರಿ ಬೀಜ ಕೊತ್ತಂಬರಿ ಬೀಜವು ಕೊಲೆಸ್ಟ್ರಾಲ್ ಮಟ್ಟ ಮತ್ತು ಟ್ರೈಗ್ಲಿಸರೈಡ್‍ಗಳನ್ನು ಕಡಿಮೆಮಾಡಲು ಸಮರ್ಥವಾಗಿದೆ ಎಂದು ಅನೇಕ ಅಧ್ಯಯನಗಳು ಸಾಬೀತು ಪಡಿಸಿವೆ. ಇದು ಯಕೃತ್ತಿನ ಪಿತ್ತರಸದ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಅಲ್ಲದೆ ಎಚ್‍ಡಿಎಲ್ ಕೊಲೆಸ್ಟ್ರಾಲ್‍ಅನ್ನು ಹೆಚ್ಚಿಸುವುದು. ಕೊತ್ತಂಬರಿ ಬೀಜ: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು... ಮೆಂತೆ ಯಕೃತ್ತು ಮತ್ತು ಕರುಳಿಗೆ ಬೇಡದ ಅನಗತ್ಯ ಕೊಬ್ಬನ್ನು ಹೀರಿಕೊಂಡು, ಅಗತ್ಯವಿರುವ ಎಚ್‍ಡಿಎಲ್ ಕೊಲೆಸ್ಟ್ರಾಲ್ ಅನ್ನು ಉತ್ಪಾದಿಸುತ್ತದೆ. ದೇಹಕ್ಕೆ ಬೇಕಾಗುವ ನಾರಿನಂಶವನ್ನು ಒದಗಿಸುತ್ತದೆ. ಮೆಂತೆ ಕಾಳು ನೆನೆಸಿದ ನೀರು- ಆಯಸ್ಸು ನೂರು! ಬೆಳ್ಳುಳ್ಳಿ ಕೆಲವು ಅಧ್ಯಯನಗಳ ಪ್ರಕಾರ ಬೆಳ್ಳುಳ್ಳಿ ಕೊಲೆಸ್ಟ್ರಾಲ್ ಮಟ್ಟದಲ್ಲಿ ಯಾವುದೇ ಪರಿಣಾಮ ಬೀರದಿದ್ದರೂ, ಹೃದಯಕ್ಕೆ ಸಂಬಂಧಿಸಿದ ರಕ್ತನಾಳಗಳ ಆರೋಗ್ಯವನ್ನು ಕಾಪಾಡುತ್ತದೆ. ನಿತ್ಯ ಬೆಳ್ಳುಳ್ಳಿ ಸೇವನೆ ಮಾಡಿದರೆ ಸೆರಮ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಎಚ್‍ಡಿಎಲ್ ಮತ್ತು ಟ್ರೈಗ್ಲಿಸರೈಡ್‍ಗಳ ಮೇಲೆ ಯಾವುದೇ ಪರಿಣಾಮ ಬೀರದು. ದಾಲ್ಚಿನ್ನಿ ಇದು ಎಚ್‍ಡಿಎಲ್, ಟ್ರೈಗ್ಲಿಸರೈಡ್ ಮತ್ತು ಸೆರಮ್ ಗ್ಲೂಕೋಸ್‍ಅನ್ನು ಕಡಿಮೆಮಾಡಲು ಸಹಾಯಮಾಡುತ್ತದೆ. ಇಲಿ ಮತ್ತು ಕೋಳಿಗಳ ಮೇಲೆ ನಡೆಸಿದ ಅಧ್ಯಯನಗಳು ಈ ವಿಷಯದಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನೀಡಿವೆ.
ಧಾನ್ಯಗಳು ಧಾನ್ಯಗಳಲ್ಲಿ ನಾರಿನಂಶವು ಸಮೃದ್ಧವಾಗಿರುವುದು. ಇವು ಕೊಲೆಸ್ಟ್ರಾಲ್‌ಗಳನ್ನು ಕಡಿಮೆ ಮಾಡಿ, ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತವೆ ಎಂದು ಹೇಳಲಾಗುತ್ತದೆ. ಬೀಜಗಳು ಬಾದಾಮಿ, ಪಿಸ್ತಾ, ಆಕ್ರೋಡು ಸೇರಿದಂತೆ ಇನ್ನಿತ ಬೀಜಗಳಲ್ಲಿ ಹೆಚ್ಚಿನ ಪ್ರಮಾಣದ ಕೊಬ್ಬಿನಂಶ ಇರುತ್ತದೆ. ಇವು ದೇಹಕ್ಕೆ ಅಗತ್ಯವಾದ ಕೊಲೆಸ್ಟ್ರಾಲ್ ಅನ್ನು ದೇಹಕ್ಕೆ ನೀಡುತ್ತದೆ. ಇವುಗಳ ಸೇವನೆ ಸೂಕ್ತ ರೀತಿಯಲ್ಲಿ ಇರಬೇಕಷ್ಟೆ. ಈರುಳ್ಳಿ ಇದರಲ್ಲಿ ಅಲೈಯನೇಸ್, ಕ್ವೆರ್ಸೆಟಿನ್ ಸಪೋನಿನ್ಸ್ ಎನ್ನುವ ಸಂಯುಕ್ತಗಳಿವೆ. ಇವು ಉತ್ತಮ ಕೊಲೆಸ್ಟ್ರಾಲ್ ಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತವೆ. ಇಲಿಗಳ ಮೇಲೆ ನಡೆಸಿದ ಅಧ್ಯಯನದ ಪ್ರಕಾರ ಎಚ್‍ಡಿಎಲ್ ಹೆಚ್ಚಿಸಿ ಎಲ್‍ಡಿಎಲ್‍ಅನ್ನು ಕಡಿಮೆ ಮಾಡುವಲ್ಲಿ ಧನಾತ್ಮಕ ಫಲಿತಾಂಶವನ್ನು ನೀಡಿದೆ ಎನ್ನಲಾಗಿದೆ. ಈರುಳ್ಳಿ ಮತ್ತು ಬೆಳ್ಳುಳ್ಳಿ- ಕ್ಯಾನ್ಸರ್ ವಿರುದ್ಧ ಹೋರಾಡುವ ಸಂಜೀವಿನಿ ತೆಂಗಿನ ಎಣ್ಣೆ ಇದರಲ್ಲಿರುವ ಪಾಲಿಫಿನಾಲ್ ಅಂಶವು ಕೊಲೆಸ್ಟ್ರಾಲ್ಮಟ್ಟ, ಟ್ರೈಗ್ಲಿಸರೈಡ್, ಫಾಸ್ಫೋಲಿಪಿಡ್ ಮತ್ತು ಎಲ್‍ಡಿಎಲ್‍ಅನ್ನು ಕಡಿಮೆ ಮಾಡಲು ಸಹಕರಿಸುತ್ತದೆ. ಇತರ ತೈಲಗಳಿಗಿಂತ ಇದು ಉತ್ತಮವಾದದ್ದು ಎನ್ನಲಾಗುತ್ತದೆ. ತೆಂಗಿನ ಎಣ್ಣೆಯಿಂದ ಹಲ್ಲು ಉಜ್ಜಿದರೆ- ಹಲ್ಲುಗಳು ಇನ್ನಷ್ಟು ಬೆಳ್ಳಗೆ ಆಗುತ್ತೆ!
👥👥👥👥👥👥👥👥👥👥👥👥👥👥👥
ನೀವು ತಿಳಿದಿರಬೇಕಾದ ತಣ್ಣೀರು ಸ್ನಾನದ ಲಾಭಗಳು ಬೆಳ್ಳಂಬೆಳಿಗ್ಗೆ ಅಥವಾ ಸಂಜೆ ಕೆಲಸದಿಂದ ಮರಳಿದ ಬಳಿಕ ತಣ್ಣೀರು ಸ್ನಾನ ಸ್ವಲ್ಪ ಕಷ್ಟವೆನ್ನಿಸಬಹುದು. ಆದರೆ ತಣ್ಣೀರು ಸ್ನಾನದ ಆರೋಗ್ಯ ಲಾಭಗಳನ್ನು ತಿಳಿದುಕೊಂಡರೆ ನೀವುಖಂಡಿತವಾಗಿಯೂ ಎರಡನೇ ವಿಚಾರ ಮಾಡದೆ ಅದನ್ನಪ್ಪಿಕೊಳ್ಳುತ್ತೀರಿ. ಬೆಳಿಗ್ಗೆ ತಣ್ಣೀರು ಸ್ನಾನ ಮಾಡುವುದರಿಂದ ಆಗಾಗ್ಗೆ ಅನಾರೋಗ್ಯಕ್ಕೆ ಗುರಿಯಾಗುವುದು ತಪ್ಪುತ್ತದೆ ಎಂದು ಇತ್ತೀಚಿನ ಅಧ್ಯಯನವೊಂದು ಹೇಳಿದೆ. ತಣ್ಣಿರು ಸ್ನಾನ ಯಾವುದೇ ವಿಧದಲ್ಲಿಯೂ ಅನಾರೋಗ್ಯಕ್ಕೆ ಚಿಕಿತ್ಸೆಯಲ್ಲದಿದ್ದರೂ ಅದು ವ್ಯಕ್ತಿಗೆ ದಿನವಿಡೀ ಅಗತ್ಯವಿರುವ ಚೈತನ್ಯವನ್ನು ನೀಡುತ್ತದೆ. ರಕ್ತಸಂಚಾರವನ್ನು ಉತ್ತಮಗೊಳಿಸುತ್ತದೆ ತಣ್ಣಿರು ಸ್ನಾನವು ಶರೀರದಲ್ಲಿ ರಕ್ತಸಂಚಾರ ಉತ್ತಮಗೊಳ್ಳಲು ನೆರವಾಗುತ್ತದೆ. ತಣ್ಣೀರು ರಕ್ತವು ನಿಮ್ಮ ಅಂಗಾಂಗಗಳಿಗೆ ತಲುಪಲು ಕಾರಣವಾಗುತ್ತದೆ. ರಕ್ತಸಂಚಾರ ಉತ್ತಮವಾಗಿದ್ದಾಗ ನಮ್ಮ ಹೃದಯವೂ ಆರೋಗ್ಯಯುತವಾಗಿರುತ್ತದೆ. ತ್ವರಿತ ಚೇತರಿಕೆ ಕಠಿಣ ವ್ಯಾಯಾಮದ ಬಳಿಕ ನಮ್ಮ ಸ್ನಾಯುಗಳು ಮತ್ತು ಸಂದುಗಳಲ್ಲಿ ನೋವು ಕಾಣಿಸಿಕೊಳ್ಳಬಹುದು. ಇಂತಹ ಸಂದರ್ಭದಲ್ಲಿ ತಣ್ಣೀರು ಸ್ನಾನ ಮಾಡುವುದರಿಂದ ನೋವು ಶಮನಗೊಳ್ಳುತ್ತದೆ. ರಕ್ತಸಂಚಾರ ಉತ್ತಮಗೊಳ್ಳುವುದರಿಂದ ವ್ಯಾಯಾಮದ ದಣಿವು ಶೀಘ್ರವಾಗಿ ಪರಿಹಾರಗೊಳ್ಳುತ್ತದೆ. ಖಿನ್ನತೆಯಿಂದ ಬಿಡುಗಡೆ ಮಿದುಳಿನಲ್ಲಿಯ ‘ಬ್ಲೂ ಸ್ಪಾಟ್’ ಖಿನ್ನತೆಯನ್ನು ನಿವಾರಿಸುವ ನೋರಾಡ್ರೆನಲಿನ್ ಎಂಬ ರಾಸಾಯನಿಕವನ್ನು ಉತ್ಪಾದಿಸುವ ಪ್ರಮುಖ ಮೂಲವಾಗಿದೆ. ತಣ್ಣೀರು ಸ್ನಾನವು ಈ ‘ಬ್ಲೂ ಸ್ಪಾಟ್’ಅನ್ನು ಉದ್ದೀಪಿಸುವಲ್ಲಿ ನೆರವಾಗುತ್ತದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ತಣ್ಣೀರು ಸ್ನಾನವು ನಮ್ಮ ಶರೀರದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಅದು ವೈರಸ್‌ಗಳ ವಿರುದ್ಧ ಹೋರಾಡುವ ಬಿಳಿಯ ರಕ್ತಕಣಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ ಮತ್ತು ತನ್ಮೂಲಕ ರೋಗ ನಿರೋಧಕ ಶಕ್ತಿಯನ್ನು ಕ್ರಿಯಾಶೀಲಗೊಳಿಸುತ್ತದೆ. ಫಲವತ್ತತೆಯನ್ನು ಹೆಚ್ಚಿಸುತ್ತದೆ ತಣ್ನೀರು ಸ್ನಾನವು ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎನ್ನುವುದು ಹಲವಾರು ಅಧ್ಯಯನಗಳಿಂದ ಕಂಡು ಬಂದಿದೆ. ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಹೆಚ್ಚುವುದರಿಂದ ಅವರ ಫಲವತ್ತತೆಯು ಹೆಚ್ಚುತ್ತದೆ. ಶಕ್ತಿಯನ್ನು ಹೆಚ್ಚಿಸುತ್ತದೆ ಉದ್ಯೋಗದ ಜಂಜಾಟಗಳಿಂದ ಪಾರಾಗಿ ಮನೆಗೆ ಮರಳಿದಾಗ ಅಥವಾ ವ್ಯಾಯಾಮದ ಬಳಿಕ ತಣ್ಣೀರು ಸ್ನಾನ ಮಾಡುವುದರಿಂದ ಶರೀರಕ್ಕೆ ಅಗತ್ಯ ಶಕ್ತಿ ದೊರೆಯುತ್ತದೆ. ತಣ್ಣೀರು ಸ್ನಾನದಿಂದ ರಕ್ತವು ಶರೀರದ ಎಲ್ಲ ಭಾಗಗಳಿಗೂ ತಲುಪುತ್ತದೆ ಮತ್ತು ಶರೀರಕ್ಕೆ ಚೈತನ್ಯ ನೀಡುತ್ತದೆ.
👤👤👤👤👤👤👤👤👤👤👤👤👤👤
ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆಗುವ ದಶ ಲಾಭಗಳು: ನೀರು ನಿಮ್ಮ ಹೆಚ್ಚಿನೆಲ್ಲಾ ಸಮಸ್ಯೆಗಳಿಗೆ ಪರಿಹಾರವಾಗ ಬಲ್ಲದು. ಮುಂಜಾನೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಹಲವಾರು ರೋಗಗಳನ್ನು ಗುಣ ಪಡಿಸ ಬಹುದು ಎಂದು ತಿಳಿದಿದೆಯಾ? ಹೆಚ್ಚಿನ ರೋಗಗಳು ಹೊಟ್ಟೆಯಿಂದಲೇ ಆರಂಭವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿದರೆ ಆಗ ನಿಮ್ಮ ಹೊಟ್ಟೆಯನ್ನು ಆರೋಗ್ಯವಾಗಿ ಇರಿಸಲು ಇದು ನೆರವಾಗಲಿದೆ. ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಯೋಚನೆಯು ಮೊದಲು ಆರಂಭವಾಗಿದ್ದು ಜಪಾನ್ ನಲ್ಲಿ. ಜಪಾನಿನಲ್ಲಿ ಜನರು ಹಲ್ಲುಜ್ಜುವ ಮೊದಲು ನಾಲ್ಕು ಲೋಟ ನೀರು ಕುಡಿದು ಇದರ ಬಳಿಕ ಅವರು ಅರ್ಧ ಗಂಟೆ ಏನೂ ತಿನ್ನುವುದಿಲ್ಲ ಅಥವಾ ಕುಡಿಯುವುದಿಲ್ಲ.
ಈ ನೀರಿನ ಥೆರಪಿ ನಿಮ್ಮನ್ನು ಆರೋಗ್ಯಕರ ಹಾಗೂ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ. ಜಪಾನ್ ನ ಜನರು ವಿಶ್ವದಲ್ಲೇ ಅತ್ಯಂತ ಹೆಚ್ಚು ಚಟುವಟಿಕೆ ಹಾಗೂ ದಕ್ಷತೆಯನ್ನು ಹೊಂದಿರುವರೆಂಬ ಹೆಗ್ಗಳಿಕೆಯಿದೆ.
ಬೆಳಗ್ಗೆ ಎದ್ದು ನೀರು ಕುಡಿಯುವುದರಿಂದ ಹಲವಾರು ರೀತಿಯ ಉಪಯೋಗಗಳಿವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೀರು ಜಾದು ಮಾಡ ಬಲ್ಲದು. ನೀವು ಊಟವಾದ ಬಳಿಕ ಬಿಸಿ ನೀರು ಕುಡಿಯಿರಿ. ಇದರಿಂದ ನೀವು ತಿಂದ ಆಹಾರದಲ್ಲಿರುವ ಎಣ್ಣೆ ಕೊಬ್ಬಾಗಿ ಪರಿವರ್ತಿತವಾಗುವುದಿಲ್ಲ. ಬೆಳಗ್ಗಿನ ಅವಧಿಯಲ್ಲಿ ಬಿಸಿನೀರು ಕುಡಿಯಲು ಪ್ರಯತ್ನಿಸಿ. ಬೆಳಗ್ಗಿನ ವೇಳೆ ಬಿಸಿ ನೀರು ಕುಡಿದರೆ ಆಗುವ ಅದ್ಭುತ ಆರೋಗ್ಯ ಲಾಭಗಳು ಇಲ್ಲಿವೆ:
🔹 ಕರುಳಿನ ಕ್ರಿಯೆ ಸರಾಗ: ಬೆಳಗ್ಗೆ ಎದ್ದು ನೀವು ನೀರು ಕುಡಿದ ಕೂಡಲೇ ಮಲ ವಿಸರ್ಜನೆ ಮಾಡುವ ಅಗತ್ಯತೆ ಕಾಣಿಸುತ್ತದೆ. ಇದರಿಂದ ನಿಮ್ಮ ಕರುಳಿನ ಕ್ರಿಯೆಯು ಸದಾ ನಿಯಮಿತವಾಗುತ್ತದೆ. ನೀವು ಪ್ರತೀ ಸಲ ಮಲ ವಿಸರ್ಜನೆ ಮಾಡಿದಾಗ ದೇಹವು ತ್ಯಾಜ್ಯದಿಂದ ಮುಕ್ತಿ ಪಡೆಯುತ್ತದೆ.
🔹ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರ ಹಾಕುತ್ತದೆ: ಪ್ರತೀ ದಿನ ನಾವು ಆಹಾರ ಅಥವಾ ಉಸಿರಾಟದ ಮೂಲಕ ಸೇವನೆ ಮಾಡುವಂತಹ ವಿಷಕಾರಿ ಅಂಶಗಳನ್ನು ನೀರು ಹೊರ ಹಾಕುತ್ತದೆ. ನೀವು ನೀರು ಕುಡಿದು ಮೂತ್ರ ವಿಸರ್ಜನೆ ಮಾಡಿದಾಗ ದೇಹದಲ್ಲಿನ ವಿಷಕಾರಿ ಅಂಶ ಹೊರ ಹೋಗುತ್ತದೆ. 🔹ಹಸಿವು ಹೆಚ್ಚಿಸುತ್ತದೆ: ಆಗಾಗ ನಾವು ನೀರು ಕುಡಿಯುವುದರಿಂದ ಮತ್ತು ನಿಮ್ಮ ಕರುಳನ್ನು ಸ್ವಚ್ಛಗೊಳಿಸುವುದರಿಂದ ದೇಹದ ಆಯಾಸ ಕಡಿಮೆಯಾಗುತ್ತದೆ. ಬೆಳಗ್ಗೆ ಬೇಗನೆ ಹಸಿವಾಗುತ್ತದೆ ಮತ್ತು ಇದರಿಂದ ಸರಿಯಾಗಿ ಉಪಹಾರ ಮಾಡ ಬಹುದು.
🔹ತಲೆನೋವು ನಿವಾರಿಸುತ್ತದೆ: ನಮಗೆ ನಿರ್ಜಲೀಕರಣದಿಂದಾಗಿ ಹೆಚ್ಚಿನ ಸಲ ತಲೆನೋವು ಕಾಣಿಸಿ ಕೊಳ್ಳುತ್ತದೆ. ಬೆಳಗ್ಗೆ ನೀರು ಕುಡಿಯುವುದರಿಂದ ನಿಮ್ಮ ದೇಹವನ್ನು ನಿರ್ಜಲೀಕರಣದಿಂದ ದೂರವಿಡ ಬಹುದು.
🔹 ಕರುಳನ್ನು ಸ್ವಚ್ಛಗೊಳಿಸುತ್ತದೆ: ಕರುಳಿನಲ್ಲಿ ಸಂಗ್ರಹವಾಗಿರುವ ಜಿಡ್ಡನ್ನು ನೀರು ಸ್ವಚ್ಛಗೊಳಿಸುತ್ತದೆ. ಇದರಿಂದ ದೇಹವು ಪೌಷ್ಠಿಕಾಂಶಗಳನ್ನು ಬೇಗನೆ ಹೀರಿ ಕೊಳ್ಳಲು ನೆರವಾಗುತ್ತದೆ.
🔹ಚಯಾಪಚಯ ಕ್ರಿಯೆಗೆ ವೇಗ : ಬಿಸಿ ನೀರನ್ನು ಕುಡಿಯುವುದರಿಂದ ನಿಮ್ಮ ಚಯಾಪಚಯ ಕ್ರಿಯೆಯು ಸುಮಾರು ಶೇ.24ರಷ್ಟು ಹೆಚ್ಚಾಗುತ್ತದೆ. ಇದರಿಂದ ನಿಮ್ಮ ಆಹಾರವು ಬೇಗನೆ ಜೀರ್ಣವಾಗಿ, ಆಹಾರ ಸಮೀಕರಿಸಿ ತೂಕ ಕಳೆದು ಕೊಳ್ಳಲು ನೆರವಾಗುತ್ತದೆ. 🔹ರಕ್ತ ಕಣಗಳ ಸೃಷ್ಟಿ: ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನಿಮ್ಮ ದೇಹವು ಕೆಂಪುರಕ್ತದ ಕಣಗಳನ್ನು ವೇಗವಾಗಿ ಉತ್ಪತ್ತಿ ಮಾಡಲು ನೆರವಾಗುತ್ತದೆ. ಇದು ಆಮ್ಲಯುಕ್ತ ರಕ್ತವಾಗಿರುವ ಕಾರಣ ನಿಮ್ಮ ಹೆಚ್ಚು ಕ್ರಿಯಾಶೀಲವಾಗಿರುವಂತೆ ಮಾಡುತ್ತದೆ.
🔹 ತೂಕ ಕಳೆದು ಕೊಳ್ಳಲು: ನೀವು ತೂಕ ಕಳೆದು ಕೊಳ್ಳಲು ಪ್ರಯತ್ನಿಸುತ್ತಿದ್ದರೆ ಆಗ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯಿರಿ. ಇದರಿಂದ ನೀವು ವಿಷಕಾರಿ ಟ್ರಾನ್ಸ್ ಫ್ಯಾಟ್ಸ್ ನ್ನು ಹೊರ ಹಾಕಲು ನೆರವಾಗುತ್ತದೆ ಮತ್ತು ದೇಹದಲ್ಲಿ ಕೊಬ್ಬಿನ ಚಯಾಪಚಯ ಕ್ರಿಯೆಯ ಮಟ್ಟ ಹೆಚ್ಚುತ್ತದೆ.
🔹ಹೊಳೆಯುವ ತ್ವಚ್ಛೆಗೆ: ನಿಮ್ಮ ಕರುಳಿನ ಕ್ರಿಯೆ ಸರಿಯಾಗಿ ಇರದ ಸಂದರ್ಭದಲ್ಲಿ ಮೊಡವೆ ಸಮಸ್ಯೆ ಕಾಣಿಸಿ ಕೊಳ್ಳುತ್ತದೆ. ನಿಮ್ಮ ಕರುಳಿನ ಕ್ರಿಯೆ ನಿಯಮಿತವಾಗಿದ್ದರೆ ನಿಮ್ಮ ಮುಖದಲ್ಲಿ ಮೊಡವೆಗಳು ಕಡಿಮೆಯಿರುತ್ತದೆ.
🔹ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ: ನಿಮ್ಮ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದು ಕೊಳ್ಳಲು ನೀರು ತುಂಬಾ ಮುಖ್ಯ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದಾಗ ಸೋಂಕಿನ ವಿರುದ್ಧ ಹೋರಾಡುವ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ....
👤👤👤👤👤👤👤👤👥👥👥👥👥👥
ಗ೦ಟಲಿನ ಕಫ ಹೊರ ಹಾಕಲು ಪರಿಣಾಮ ಕಾರಿ ವಿದಾನ ನಮಗೆ ಶೀತ ಆದಾಗ ಅಥವಾ ನಮ್ಮ ಉಸಿರಾಟದ ನಾಳದ ಮೇಲ್ಭಾಗದಲ್ಲಿ ಸೋಂಕು ಉಂಟಾದಾಗ, ಕಫ ಉಂಟಾಗುವುದು ಸಾಮಾನ್ಯ. ಇದು ಜೀವಕ್ಕೆ ಕುತ್ತು ತರುವಂತದಲ್ಲ ಎಂದರೂ ಇದನ್ನು ಸರಿಯಾದ ಸಮಯಕ್ಕೆ ತೊಲಗಿಸದಿದ್ದರೆ ಅದು ನಿಮ್ಮ ಶ್ವಾಸಕೋಶದ ನಳಿಕೆಗಳಿಗೆ ತಡೆಯೊಡ್ಡಿ, ಉಸಿರಾಟದ ನಾಳದ ಮೇಲ್ಭಾಗದಲ್ಲಿ ಎರಡನೆಯ ಸೋಂಕು ಹುಟ್ಟು ಹಾಕಬಹದು. ಇಂದು ಈ ಲೇಖನದಲ್ಲಿ ನಾನು ನಿಮಗೆ ಗಂಟಲಿನ ಕಫವನ್ನು ಹೊರಹಾಕಲು ಸುಲಭ ಮತ್ತು ಅತ್ಯಂತ ಪರಿಣಾಮಕಾರಿ ವಿಧಾನಗಳು ಯಾವುಗಳೆಂದು ತಿಳಿಸುತ್ತೇನೆ ಓದಿರಿ.
1. ಉಪ್ಪು ನೀರು ಒಂದು ಲೋಟದಷ್ಟು ಉಗುರುಬೆಚ್ಚಗಿನ ನೀರಿಗೆ ಕಾಲು ಚಮಚದಷ್ಟು ಉಪ್ಪು ಬೆರೆಸಿ. ಈ ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸಿ. ಇದನ್ನು ದಿನಕ್ಕೆ ಹಲವಾರು ಬಾರಿ ಮಾಡಬೇಕು. ಉಪ್ಪಿಗೆ ಬ್ಯಾಕ್ಟೀರಿಯಾಗಳನ್ನೂ ಕೊಳ್ಳುವ ಸಾಮರ್ಥ್ಯ ಇದ್ದು ಇದು ಸೋಂಕನ್ನು ತಡೆಗಟ್ಟಿ ಕಫ ಹೆಚ್ಚಾಗುವುದನ್ನು ತಡೆಯುತ್ತದೆ.
2. ಶುಂಠಿ ಶುಂಠಿಯು ಒಂದು ನೈಸರ್ಗಿಕ ಆಂಟಿಹಿಸ್ಟಾಮೈನ್ ಮತ್ತು ಮೂಗುಕಟ್ಟುವುದರ ನಿವಾರಕ. ಅಲ್ಲದೆ ಇದರಲ್ಲಿ ಶಗೋಲ್ ಎಂಬ ಪದಾರ್ಥವಿದ್ದು ಇದು ಶೀತ ಉಂಟುಮಾಡುವ ವೈರಾಣುಗಳೊಂದಿಗೆ ಹೋರಾಡುತ್ತದೆ. ಶುಂಠಿಯ ವೈರಾಣು-ವಿರೋಧಿ ಮತ್ತು ಬ್ಯಾಕ್ಟೀರಿಯಾ-ವಿರೋಧಿ ಗುಣಗಳೊಂದಿಗೆ, ಇದು ಉಸಿರಾಟವನ್ನು ಸುಲಭ ಕೂಡ ಮಾಡುತ್ತದೆ. ಒಂದು ಶುಂಠಿಯನ್ನು ಚಿಕ್ಕ ತುಂಡುಗಳಾಗಿ ಕತ್ತರಿಸಿ. ನಂತರ ಒಂದು ಚಮಚದಷ್ಟು ಶುಂಠಿಯ ತುಂಡುಗಳನ್ನು ಒಂದು ಲೋಟದಷ್ಟು ಬಿಸಿ ಬಿಸಿ ನೀರಿನಲ್ಲಿ ಹಾಕಿ. ಶುಂಠಿ ನೀರಿನೊಂದಿಗೆ ಬೆರೆಯಲು ಸ್ವಲ್ಪ ಹೊತ್ತು ಬಿಟ್ಟು, ನಂತರ ಅದಕ್ಕೆ ಎರಡು ಚಮಚದಷ್ಟು ಜೇನುತುಪ್ಪ ಬೆರೆಸಿ. ಈ ಮಿಶ್ರಣವನ್ನು ಚೆನ್ನಾಗಿ ಕಲಿಸಿ ದಿನಕ್ಕೆ ಮೂರ್ನಾಲ್ಕು ಬಾರಿ ಸೇವಿಸಿರಿ. ಪರ್ಯಾಯವಾಗಿ ನೀವು ಕೆಲವಷ್ಟು ಶುಂಠಿಯ ತುಂಡುಗಳನ್ನು ಹಾಗೆ ಬಾಯಲ್ಲಿ ಅಗಿಯಬಹುದು.
3. ಮೆಣಸಿನ ಪುಡಿ ಮೆಣಸು ನಿಮ್ಮ ಗಂಟಲಿನಲ್ಲಿರುವ ಕಫವನ್ನು ಕಡಿಮೆ ಮಾಡಿ ಉಸಿರಾಟಕ್ಕೆ ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ ಇದು ಕೆಮ್ಮಿನಿಂದ ಉಂಟಾದ ಎದೆ ನೋವು ಮತ್ತು ಗಂಟಲು ಕೆರೆತವನ್ನೂ ಕಡಿಮೆ ಮಾಡುತ್ತದೆ. ಮೊದಲಿಗೆ ಕಾಲು ಚಮಚದಷ್ಟು ಮೆಣಸಿನ ಪುಡಿ, ಕಾಲು ಚಮಚದಷ್ಟು ತುರಿದ ಶುಂಠಿ, ಒಂದು ಚಮಚದಷ್ಟು ಜೇನುತುಪ್ಪ – ಈ ಮೂರರ ಮಿಶ್ರಣ ಮಾಡಿ. ನಂತರ ಈ ಮಿಶ್ರಣಕ್ಕೆ ಎರಡು ಚಮಚದಷ್ಟು ನೀರನ್ನು ಬೆರೆಸಿ, ಕಲಿಸಿ. ಈ ಮಿಶ್ರಣವನ್ನು ದಿನಕ್ಕೆ 2-3 ಬಾರಿ ಸೇವಿಸುವುದರಿಂದ ಕಫ ಕಡಿಮೆ ಆಗುತ್ತದೆ.
4. ನಿಂಬೆಹಣ್ಣು ಕಫವನ್ನು ಮತ್ತು ಲೋಳೆಯನ್ನು ಹೋಗಲಾಡಿಸುವುದರಲ್ಲಿ ನಿಂಬೆಹಣ್ಣು ಬಹಳಷ್ಟು ಸಹಾಯ ಮಾಡುತ್ತದೆ. ನಿಂಬೆ ಹಣ್ಣಿನಲ್ಲಿ ಕೇವಲ ಆಂಟಿ-ಬ್ಯಾಕ್ಟೀರಿಯಾ ಗುಣಗಳು ಇರುವದಷ್ಟೇ ಅಲ್ಲದೆ, ಅದರಲ್ಲಿರುವ ವಿಟಮಿನ್ C ನಿಮ್ಮ ದೇಹಕ್ಕೆ ಸೋಂಕಿನ ವಿರುದ್ಧ ಹೋರಾಡಲು ಶಕ್ತಿ ನೀಡುತ್ತದೆ. ಮೊದಲಿಗೆ ಎರಡು ಚಮಚದಷ್ಟು ನಿಂಬೆರಸವನ್ನು ಒಂದು ಚಮಚದಷ್ಟು ಜೇನುತುಪ್ಪ ಮತ್ತು ಒಂದು ಲೋಟದಷ್ಟು ಕುದಿಸಿದ ನೀರಿಗೆ ಬೆರೆಸಿ. ಈ ಮಿಶ್ರಣವನ್ನು ದಿನಕ್ಕೆ ಮೂರು ಬಾರಿ ಸೇವಿಸಿ. ಇನ್ನೊಂದು ವಿಧಾನ ಎಂದರೆ ನಿಂಬೆಹಣ್ಣನು ಕೇವಲ ಎರಡು ಭಾಗ ಮಾಡಿ. ಒಂದು ತುಂಡಿನ ಮೇಲೆ ಮೆಣಸಿನ ಪುಡಿ ಮತ್ತು ಉಪ್ಪನ್ನು ಉದುರಿಸಿ, ಅದನ್ನು ಚೀಪಿ.
5. ಬೆಳ್ಳುಳ್ಳಿ ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾ-ವಿರೋಧಿ, ವೈರಾಣು-ವಿರೋಧಿ ಮತ್ತು ಉರಿತ-ವಿರೋಧಿ ಗುಣಗಳಿದ್ದು ಇದು ಉಸಿರಾಟದ ನಾಳದ ಉರಿಯೂತವನ್ನು ಕಡಿಮೆ ಮಾಡುತ್ತದೆ. ನೀವು ಕಫವನ್ನು ನಿರ್ಮೂಲನೆ ಮಾಡಲು ಬೆಳ್ಳುಳ್ಳಿ ಚೆನ್ನಾಗಿ ಜೇಜ್ಜಿಕೊಳ್ಳಿ. ಈ ಜೇಜ್ಜಿದ ಬೆಳ್ಳುಳ್ಳಿಯ ಎಸಳುಗಳನ್ನು ಬೆಳಗ್ಗೆ ಎದ್ದೊಡನೆ ಮತ್ತು ಮಲಗುವ ಮುನ್ನ ನೀರಿನೊಂದಿಗೆ ಸೇವಿಸಿ. ನಿಮ್ಮ ಮೂಗಿನಲ್ಲಿ ಕಟ್ಟಿಕೊಂಡಿರುವ ಲೋಳೆಯನ್ನು ಹೋಗಲಾಡಿಸಬೇಕೆಂದರೆ ಬೆಳ್ಳುಳ್ಳಿಯನ್ನು ಹಿಂಡಿ ಅದರ ರಸ ತೆಗಿಯಿರಿ. ನಂತರ ಈ ಬೆಳ್ಳುಳ್ಳಿ ರಸವನ್ನು ಒಂದು ಲೋಟದಷ್ಟು ನೀರಿನೊಂದಿಗೆ ಬೆರೆಸಿ. ಈ ಮಿಶ್ರಣದ ಕೆಲವು ಹನಿಗಳನ್ನು ನಿಮ್ಮ ಮೂಗಿನೊಳಗೆ ಬಿಟ್ಟುಕೊಳ್ಳಿ. ಇದು ಕಟ್ಟಿಕೊಂಡಿರುವ ಲೋಳೆಯನ್ನು ನೀರು ಮಾಡಿ ಅದು ಆಚೆ ಬರುವಂತೆ ಮಾಡುತ್ತದೆ
👤👤👤👥👥👥👥👥👥👤👤👤👤👤
*ನಿದ್ದೆ ಕೆಡಿಸುವ ಹಲ್ಲು ನೋವಿಗೆ, ಪವರ್ ಫುಲ್ ಮನೆಮದ್ದು*
ಹಲ್ಲುನೋವು ಎದುರಾದರೆ ಇದನ್ನು ಅನುಭವಿಸಿದವರಿಗೇ ಇದರ ಕಷ್ಟ ಗೊತ್ತು. ಇದಕ್ಕೆ ಹಲವಾರು ಕಾರಣಗಳಿವೆ. ಹಲ್ಲುಗಳಲ್ಲಿ ಕುಳಿ, ಒಸಡುಗಳಲ್ಲಿ ಸೋಂಕು, ತೆರೆದಿರುವ ಹಲ್ಲಿನ ಬೇರು, ಸೀಳಿದ ಹಲ್ಲು, ಹಲ್ಲಿನ ಕುಳಿಯನ್ನು ತುಂಬಿದ್ದುದು ಸಡಿಲವಾಗಿರುವುದು, ದವಡೆಯ ಬೋನಿನಲ್ಲಿ ಸೋಂಕು ಇತ್ಯಾದಿಗಳು. ಅತಿಯಾದ ಹಲ್ಲುನೋವಿಗೆ ಪ್ರಮುಖವಾಗಿ ಹಲ್ಲಿನ ಬುಡದಲ್ಲಿ ಆದ ಸೋಂಕು ಕಾರಣವಾಗಿದೆ. ಪಲ್ಪ್ ಎಂದು ಕರೆಯಲಾಗುವ ಈ ಭಾಗದಲ್ಲಿ ಅತಿ ಹೆಚ್ಚಿನ ನರಾಗ್ರಗಳಿದ್ದು ಇವು ಅತಿ ಸಂವೇದನಾಶೀಲವಾಗಿರುತ್ತವೆ. ಈ ಭಾಗದಲ್ಲಿ ಸೋಂಕು ಉಂಟಾಗಲು ಕೆಲವಾರು ಕಾರಣಗಳಿವೆ. ಈ ನೋವನ್ನು ಕಡಿಮೆಗೊಳಿಸಲು ಕೆಲವು ಮನೆಮದ್ದುಗಳಿದ್ದು ಕೆಳಗಿನ ಸ್ಲೈಡ್ ಶೋ ಮೂಲಕ ವಿವರಿಸಲಾಗಿದೆ: *ಉಪ್ಪು ಮತ್ತು ಕಾಳುಮೆಣಸು* ಇವುಗಳಲ್ಲಿರುವ ಬ್ಯಾಕ್ಟ್ರೀರಿಯಾ ಮತ್ತು ಉರಿಯೂತ ನಿವಾರಕ ಗುಣಗಳು ಒಸಡುಗಳಲ್ಲಿ ಆಗಿರುವ ಸೋಂಕು ನಿವಾರಿಸಿ ನೋವು ಕಡಿಮೆಯಾಗಲು ನೆರವಾಗುತ್ತವೆ.
* ಒಂದು ಬೋಗುಣಿಯಲ್ಲಿ ಸಮಪ್ರಮಾಣದಲ್ಲಿ ಉಪ್ಪು ಮತ್ತು ಕಾಳುಮೆಣಸು ಬೆರೆಸಿ ಕೆಲವು ಹನಿ ನೀರು ಸೇರಿಸಿ ದಪ್ಪನೆಯ ಲೇಪನ ತಯಾರಿಸಿ
* ಈ ಲೇಪನವನ್ನು ನೋವು ಕೊಡುತ್ತಿರುವ ಭಾಗದ ಮೇಲೆ ಹಚ್ಚಿ ಕೆಲವು ನಿಮಿಷ ಹಾಗೇ ಬಿಡಿ. ಬಳಿಕ ಬಾಯಿಯನ್ನು ಮುಕ್ಕಳಿಸಿ ಉಗಿಯಿರಿ.
* ಈ ವಿಧಾನವನ್ನು ದಿನಕ್ಕೆ ಎರಡು ಬಾರಿಯಂತೆ ನೋವು ಕಡಿಮೆಯಾಗುವವರೆಗೆ ಮುಂದುವರೆಸಿ.
*ಬೆಳ್ಳುಳ್ಳಿ*
ಇದರ ಪ್ರತಿಜೀವಕ ಮತ್ತು ಔಷಧೀಯ ಗುಣಗಳು ಹಲ್ಲುನೋವನ್ನು ಕಡಿಮೆಗೊಳಿಸಲು ಶಕ್ತವಾಗಿವೆ.
* ಹಸಿ ಬೆಳ್ಳುಳ್ಳಿ ಜಜ್ಜಿ ಅಥವಾ ಪುಡಿಯನ್ನು ಉಪಯೋಗಿಸಿ ಕೊಂಚ ಉಪ್ಪು ಸೇರಿಸಿ ಮಿಶ್ರಣ ಮಾಡಿ. ಕೊಂಚ ನೀರು ಸೇರಿಸಿ ದಪ್ಪನೆಯ ಲೇಪನವನ್ನಾಗಿಸಿ.
* ಈ ಲೇಪನವನ್ನು ಬಾಧಿತ ಹಲ್ಲಿನ ಮೇಲೆ ಇರಿಸಿ. ಸಾಧ್ಯವಾದರೆ ಹಸಿ ಬೆಳ್ಳುಳ್ಳಿಯ ಎಸಳನ್ನು ಬಾಧಿತ ಹಲ್ಲಿನ ಮೇಲೆ ಇಟ್ಟು ಜಗಿಯಿರಿ.
* ಈ ವಿಧಾನವನ್ನು ದಿನಕ್ಕೆರಡು ಬಾರಿಯಂತೆ ಕೆಲವು ದಿನ ಅನುಸರಿಸಿ.
*ಲವಂಗ*
ಲವಂಗದ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ, ಆಂಟಿ ಆಕ್ಸಿಡೆಂಟು ಮತ್ತು ಅರವಳಿಕೆ ನೀಡುವ ಗುಣಗಳು ಹಲ್ಲುನೋವನ್ನು ಕಡಿಮೆಗೊಳಿಸಲು ನೆರವಾಗುತ್ತವೆ. ಅದರಲ್ಲೂ ಸೋಂಕು ಉಂಟಾಗಿ ನೋವಾಗುತ್ತಿದ್ದರೆ ಈ ವಿಧಾನ ಸೂಕ್ತವಾಗಿದೆ.
* ಎರಡು ಲವಂಗಗಳನ್ನು ನುಣ್ಣಗೆ ಅರೆದು ಕೊಂಚ ಆಲಿವ್ ಎಣ್ಣೆ ಅಥವಾ ಬೇರಾವುದಾದರೂ ಅಡುಗೆ ಎಣ್ಣೆ ಬೆರೆಸಿ ಸೋಂಕು ತಗುಲಿದ ಭಾಗಕ್ಕೆ ಹಚ್ಚಿ
* ಪರ್ಯಾಯವಾಗಿ ಹತ್ತಿಯುಂಡೆಯನ್ನು ಲವಂಗದ ಎಣ್ಣೆಯಲ್ಲಿ ಅದ್ದಿ ನೋವಿರುವ ಭಾಗದಲ್ಲಿರಿಸಿ ಕಚ್ಚಿಕೊಳ್ಳಿ.
* ಇನ್ನೊಂದು ವಿಧಾನದಲ್ಲಿ ಕೊಂಚ ಬಿಸಿನೀರಿಗೆ ಕೆಲವು ಹನಿ ಲವಂಗದ ಎಣ್ಣೆ ಬೆರೆಸಿ ಮುಕ್ಕಳಿಸಿ.
*ಈರುಳ್ಳಿ*
ಇದರ ಕೀಟಾಣುವಿರೋಧಿ ಮತ್ತು ನಂಜುನಿರೋಧಕ ಗುಣಗಳು ಹಲ್ಲುನೋವು ಕಡಿಮೆಗೊಳಿಸಲು ನೆರವಾಗುತ್ತವೆ. ವಿಶೇಷವಾಗಿ ಒಸಡಿನಲ್ಲಿ ಸೋಂಕು ಉಂಟಾಗಿದ್ದರೆ ಈ ವಿಧಾನ ಉತ್ತಮವಾಗಿದೆ. ಹಸಿ ಈರುಳ್ಳಿಯನ್ನು ನೋವಿರುವ ಹಲ್ಲುಗಳ ಭಾಗದಲ್ಲಿ ಅಗಿಯಿರಿ. ಇಲ್ಲದಿದ್ದರೆ ಕೆಲವು ನಿಮಿಷಗಳವೆರೆಗೆ ಹಸಿ ಈರುಳ್ಳಿಯ ಭಾಗವೊಂದನ್ನು ಒಸಡಿಗೆ ತಗಲುವಂತೆ ಇರಿಸಿ. *ಉಗುರುಬೆಚ್ಚನೆಯ ಉಪ್ಪುನೀರು* ಒಂದು ಲೋಟ ಉಗುರುಬೆಚ್ಚನೆಯ ನೀರಿನಲ್ಲಿ ಅರ್ಧ ಚಮಚ ಉಪ್ಪು ಸೇರ್ಇಸಿ ಈ ನೀರಿನಿಂದ ಬಾಯಿಯನ್ನು ಮುಕ್ಕಳಿಸುತ್ತಾ ಇರಿ. ಇದರಿಂದ ಸೋಂಕು ಉಂಟಾಗಿದ್ದ ಒಸಡಿನಲ್ಲಿರುವ ಬ್ಯಾಕ್ಟೀರಿಯಾಗಳು ತೊಲಗಿ ಸೋಂಕು ಹಾಗೂ ನೋವು ಕಡಿಮೆಯಾಗುತ್ತದೆ.
👤👤👤👤👤👤👤👤👤👤👤👤👤👤
ಬಿಸಿ ಹಾಲಿಗೆ ಬೆಲ್ಲ ಹಾಕಿ ಕುಡಿದರೆ ಏನಾಗುತ್ತದೆಂದು ಗೊತ್ತೆ…? ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು ಸಹ ನಿವಾರಣೆ ಆಗುತ್ತವೆ. ಈ ರೀತಿ ಕುಡಿಯುವುದರಿಂದ ನಮಗಾಗುವ ಪ್ರಯೋಜನಗಳನ್ನು ತಿಳಿದುಕೊಳ್ಳೋಣ
1.ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ಸ್ಥೂಲಕಾಯ ನಿವಾರಣೆಯಾಗುತ್ತದೆ. ಬೆಲ್ಲದಲ್ಲಿರುವ ಔಷಧೀಯ ಗುಣಗಳಿಂದ ಶರೀರದಲ್ಲಿರುವ ಕೊಬ್ಬು ಕಡಿಮೆಯಾಗುತ್ತದೆ. ಹೀಗಾಗಿ ದೇಹದ ತೂಕ ಕಡಿಮೆಯಾಗುತ್ತದೆ. ನಿತ್ಯವೂ ಹೀಗೆ ಸೇವಿಸುವುದರಿಂದ ಶರೀರದ ತೂಕ ಸಮತೋಲನದಲ್ಲಿರುತ್ತದೆ.
2. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ರಕ್ತಹೀನತೆಯಿಂದ ನರಳುತ್ತಿದ್ದಾರೆ. ಇದರ ಪರಿಣಾಮವಾಗಿ ಆರೋಗ್ಯ ಏರು ಪೇರಾಗುತ್ತದೆ. ಶರೀರಕ್ಕೆ ಪೋಷಕಾಂಷಗಳು ಸೇರ್ಪಡೆಯಾಗುವುದಿಲ್ಲ. ಆದರೆ,ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಮುಖ್ಯವಾಗಿ ಮಹಿಳೆಯರಿಗೆ ಇದು ವರದಾನವಾಗಿದೆ. 3. ಬಿಸಿ ಹಾಲಿಗೆ ಬೆಲ್ಲ ಬೆರೆಸಿ ಸೇವಿಸಿದರೆ, ಅದರಲ್ಲಿರುವ ಪೋಷಕಾಂಶಗಳಿಂದ ತಲೆ ಕೂದಲು ಹೊಳಪಾಗುತ್ತವೆ. ಕೂದಲು ಉದುರುವುದು ನಿಂತುಹೋಗುತ್ತದೆ, ತಲೆಹೊಟ್ಟು ನಿವಾರಣೆಯಾಗುತ್ತದೆ.
4. ಮಹಿಳೆಯರಿಗೆ ಋತುಚಕ್ರದಲ್ಲಿ ಪೀಡಿಸುವ ವಿವಿಧ ಸಮಸ್ಯೆಗಳು,ಮುಖ್ಯವಾಗಿ ಹೊಟ್ಟೆ ನೋವು ಕಡಿಮೆಯಾಗುತ್ತದೆ.
5.ಬೆಲ್ಲ ಬೆರೆಸಿದ ಹಾಲಿಗೆ ಪ್ರಾಕೃತಿಕವಾದ ಆಂಟಿಬಯಾಟಿಕ್,ಆಂಟಿ ವೈರಲ್ ಗುಣಗಳಿರುತ್ತದೆ. ಆದುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ವೈರಸ್ ಸೊಂಕುಗಳು ಕಡಿಮೆಯಾಗುತ್ತವೆ.
6. ವೃದ್ಧಾಪ್ಯದಲ್ಲಿ ಬಹಳಷ್ಟು ಮಂದಿ ಕೀಲು ನೋವುಗಳ ಸಮಸ್ಯೆಗೆ ಗುರಿಯಾಗುತ್ತಾರೆ. ಅಂತಹವರು ಪ್ರತಿದಿನ ಬಿಸಿ ಹಾಲಿಗೆ ಬೆಲ್ಲ ಸೇರಿಸಿ ಸೇವಿಸಿದರೆ ನೋವಿನಿಂದ ಉಪಶಮನ ಲಭಿಸುತ್ತದೆ ಮತ್ತು ಕೀಲುಗಳು ದೃಢವಾಗುತ್ತವೆ.
👤👤👤👤👤👤👤👤👤👤👤👤👤👤
ನಮ್ಮ ಸುತ್ತಮುತ್ತಲಿನ ವಸ್ತುಗಳನ್ನು ಉಪಯೋಗ ಮಾಡಿಕೊಂಡು ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು .ಪದೇ ಪದೇ ಹೋಗುವ ಆಸ್ಪತ್ರೆ ಗಳ ಕಾಟ ತಪ್ಪುವುದು.ದುಂದು ವೆಚ್ಚಗಳಿಗೆ ಕಡಿವಾಣ ಹಾಕಬಹುದು
Wednesday, April 22, 2020
What's app Health information
Subscribe to:
Post Comments (Atom)
ಶುಗರ್ ಹತೋಟಿಗೆ ತರಲು ಸುಲಭ ವಿಧಾನ:
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಎರಡು ಅಮೃತ ಬಳ್ಳಿ ಎಲೆಯನ್ನು ತೊಳೆದು ಸ್ವಚ್ಛ ಮಾಡಿ ನಂತರ ಜಜ್ಜಿ ರಸ ತೆಗೆದು ಎರಡು ಚಿಟಿಕೆ ಅರಿಶಿನ ಪುಡಿ ಹಾಕಿ ದಿನವೂ ಖಾಲಿ ಹೊಟ್ಟೆಯಲ್ಲಿ ಸೇವಿಸಿ 42 ದಿನ ಗಳಲ್ಲಿ ಶು...
-
ಅಳಲೆ ಕಾಯಿ , ತಾರೆ ಕಾಯಿ, ನೆಲ್ಲಿಕಾಯಿ,ಸಿಗೆ ಕಾಯಿ, ಅಂಟುವಾಳ ಕಾಯಿ, ಮೆಂತ್ಯ, ದಾಸವಾಳದ ಹೂ , ದಾಸವಾಳದ ಎಲೆ, ಮೆಹೆಂದಿ ಸೊಪ್ಪು, ನೀಲಿ ಸೊಪ್ಪು, ಭೃಂಗರಾಜ ಸೊಪ್ಪು,ಇಲ...
-
ಬಿಸಿನೀರಲ್ಲಿ ಕೇವಲ 5 ನಿಮಿಷ ಪಾದ ಅದ್ದಿದರೆ ಯಾವೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ? * ನಮ್ಮ ಕಾಲುಗಳೇ ನಮ್ಮ ದೇಹಕ್ಕೆ ಆಧಾರಸ್ತಂಭ, ನಮ್ಮ ಇಡೀ ದೇಹ ನಿಂತಿರುವುದೇ ನಮ್ಮ...
No comments:
Post a Comment